ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಆಚರಣೆ

0

ಬೆಳ್ತಂಗಡಿ: ಜೂ.27ರಂದು ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಉಪನ್ಯಾಸಕಿ ನಿರೀಕ್ಷಾ ರವರ ಮುಂದಾಳುತನದಲ್ಲಿ ಫ್ರೆಷರ್ಸ್ ಡೇಯನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಭಗಿನಿ ಆರೋಗ್ಯರವರು ಹಾಗೂ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಹೆರಾಲ್ಡ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ  ಮಾತನಾಡಿದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಮನೋರಂಜಿಸಿದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಯಶಸ್ವಿನಿ ನಿರೂಪಿಸಿದರು.

LEAVE A REPLY

Please enter your comment!
Please enter your name here