

ಶಿಬಾಜೆ: ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಸಾಂತ್ವನ ತಿಳಿಸಿದರು.

ಅಪಾಯಕಾರಿ ವಿದ್ಯುತ್ ಕಂಬಗಳನ್ನು ಶೀಘ್ರವೇ ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು ಮತ್ತು ಮೃತರ ಕುಟುಂಬಕ್ಕೆ ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ನೀಡಲು ಆಗ್ರಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೀಮೆಂಟ್ ಬೆಂಜಮಿನ್ ಬ್ಲಾಗ್ಸ್ ಶಿಬಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ರತೀಶ್ ಗೌಡ, ಉಪಾಧ್ಯಕ್ಷ ದಿನಕರ ಕುರುಪ್, ಶಿಶಿಲ ಗ್ರಾ.ಪಂ.ಮಾಜಿ ಅಧ್ಯಕ್ಷ ಸಂದೀಪ್, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತುಟ, ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.