

ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಉದ್ಘಾಟನೆಯನ್ನು ನೇರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲ ವಹಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ರಮೇಶ್ ರಾವ್ ಕೊಡಂಗೆ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ,ನಿಡ್ಲೆ ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗಣೇಶ್ ಹೆಬ್ಬಾರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರುಕ್ಕಯ್ಯ ಪೂಜಾರಿ, ಗ್ರಾ.ಪಂ. ಸದಸ್ಯರಾದ ಶೈಲಜಾ, ಹೇಮಾವತಿ, ಗಣೇಶ್ ಸ್ಟೋರ್ ಮಾಲಕ ಪುರಂದರ ಗೌಡ, ನಿಸರ್ಗ ಯುವಜನೇತರ ಯುವಕ ಸಂಘದ ಅಧ್ಯಕ್ಷ ಪುನೀತ್ ಕುಮಾರ್, ಜ್ಯೋತಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಅಠವಳೆ, ಸಂಪನ್ಮೂಲ ವ್ಯಕ್ತಿ ಪ್ರತಿಭಾ, ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾವ್, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಮಾಧವ ಗೌಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಸದಸ್ಯರು, ಅಧ್ಯಾಪಕರು, ಅಕ್ಷರದಾಸೋಹದ ಸಿಬ್ಬಂದಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿದರು, ಶಿಕ್ಷಕ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.