


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ರವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು ಜೂ.27ರಂದು ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ (ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ) ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.


ಅವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶಾಲೆಯಲ್ಲಿ ಇಂದು (ಜೂ.29) ಅಭಿನಂದಿಸಿದರು. ವಿದ್ಯಾರ್ಥಿಗೆ ಕಲಾಶಿಕ್ಷಕ ಯಶ್ವಿತ್ ತರಬೇತಿ ನೀಡಿದ್ದರು.









