

ಅರಸಿನಮಕ್ಕಿ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿಂದ ನಿವೃತ್ತರಾಗುತ್ತಿರುವ ಪುಷ್ಪರಾಜ್ ಕೆ.ಸಿ ಇವರಿಗೆ ಬಿಳ್ಕೊಡುಗೆ ಸಮಾರಂಭ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಅತಿಥಿಗಳಾಗಿ ಆಗಮಿಸಿದ ಪ್ರಾ.ಕೃ.ಪ.ಸ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಸಭಾಧ್ಯಕ್ಷತೆ ವಹಿಸಿ ನಿವೃತ್ತಿ ಜೀವನಕ್ಕೆ ಶುಭ ಕೋರಿದರು.
ನಿರ್ದೇಶಕ ಧರ್ಮರಾಜ ಗೌಡ, ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್,ಅರಸಿನಮಕ್ಕಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್ .ಎಸ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಶಾಖಾ ಪ್ರಬಂಧಕರಾದ ಸತ್ಯನಾರಾಯಣ, ಅರಸಿನಮಕ್ಕಿ ಪಂಚಾಯತ್ ಪಿ ಡಿ ಓ ಜಯರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಗಮಿಸಿದ ಅತಿಥಿಗಳು ಪುಷ್ಪರಾಜ್ ರವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಅಬ್ಬಾಸ್ ಅಸರ್ ಸ್ವಾಗತ ಮಾಡಿದರು.ಬ್ಯಾಂಕಿನ ಸಿಬ್ಬಂದಿ ವಂದನ್ ಕಾರ್ಯಕ್ರಮ ನಿರೂಪಿಸಿ ಅತಿಥಿಗಳಿಗೆ ವಂದಿಸಿದರು.