ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕ ವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ ನಡೆಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ, ಡೆಂಗ್ಯೂ ಜ್ವರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ವಹಿಸುವುದು, ವಿದ್ಯುತ್ ಸಂಪರ್ಕದ ಲೈನ್ ಗಳಿಗೆ ತಾಗಿಕೊಂಡಿರುವ ಮರಗಳನ್ನು ತೆರವು ಮಾಡಲು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಪಂಚಾಯತ್ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ವಹಿಸುವುದು, ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸಂಬಂಧಿಸಿದ ಇಲಾಖೆಗೆ ತುರ್ತು ವರದಿ ನೀಡಿ ಕ್ರಮವಹಿಸುವುದು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮಾಹಿತಿ ನೀಡಿದರು.
ಸದಸ್ಯರಾದ ಅಬ್ದುಲ್ ಕರೀಮ್, ಸುಭಾಷಿಣಿ ಕೆ, ಮೋಹಿನಿ, ವಿಜಯ ಗೌಡ, ಲತೀಫ್ ಪರಿಮ, ಮರೀಟಾ ಪಿಂಟೋ, ಶ್ವೇತಾ ಕೆ. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ದನ್ಯವಾದವಿತ್ತರು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಯ ಮುಖ್ಯಸ್ಥರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆ, ಗ್ರಾಮ ಬೀಟ್ ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.