ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಬೆಳಾಲು ಹಾಗೂ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಉಜಿರೆ – ಬೆಳಾಲು ಇವುಗಳ ಜಂಟಿ ಆಶ್ರಯದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬೆಳಾಲು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ 40ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಜೂ.30ರಂದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಉಜಿರೆ ಯಕ್ಷಗಾನ ಕಲಾವಿದ ಅಶೋಕ್ ಭಟ್ ಸತ್ಯನಾರಾಯಣ ದೇವರ ಕಥೆಯನ್ನು ಅರ್ಥ ಪೂರ್ಣವಾಗಿ ಸವಿಸ್ತಾರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ಉಜಿರೆ ಒಕ್ಕೂಟದ ಅಧ್ಯಕ್ಷೆ ಲೀಲಾವತಿ, ಬೆಳಾಲು ಒಕ್ಕೂಟದ ಅಧ್ಯಕ್ಷ ಹಾಗೂ ಪೂಜಾರ ಸಮಿತಿ ಅಧ್ಯಕ್ಷ ರತ್ನಾಕರ ಆಚಾರ್ಯ, ಮಾಯಾ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷೆ ನೀಲಾವತಿ, ಸೇವಾ ಪ್ರತಿನಿಧಿಗಳಾದ ಪ್ರಭಾ, ಪ್ರಮೀಳಾ, ತಾರಾನಾಥ, ಭಜನಾ ಮಂಡಳಿಗಳ, ಪೂಜಾ ಸಮಿತಿಯ, ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ವೈದಿಕ ಕಾರ್ಯ ನೆರವೇರಿಸಿದರು