ಉಜಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನದ ಶಿಕ್ಷಣ ಅತೀ ಮುಖ್ಯವಾಗಿದೆ.
ಬರೀ ವಿದ್ಯೆ ಪಡೆದರೆ ಸಾಲದು; ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರಿಂದಲೂ ಕಸಿಯಲಾಗದ ಆಸ್ತಿ. ಜೀವನದಲ್ಲಿ ವಿದ್ಯೆ ಅತಿದೊಡ್ಡ ಸಂಪತ್ತು.
ಈ ಸಂಪತ್ತು ಮುಂದಿನ ಜೀವನದಲ್ಲಿ ಇನ್ನಷ್ಟು ಹೆಚ್ಚಿಸಿಕೊಳ್ಳಿ ಎಂದು ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಇದು ನಿಮ್ಮ ಮುಂದಿನ ಉದ್ಯೋಗಕ್ಕೆ ದಾರಿದೀಪವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ – ಲಾಯಿಲ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಸುರೇಶ್ ಮೊಯಿಲಿ ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.
ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು.
ಒಟ್ಟು 30 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರ ಜಯಶ್ರೀ ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.