ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಇತ್ತೀಚೆಗೆ ಕೊಡಗಿನಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿನಿ ನೇಹಾ ಹತ್ಯೆ, ಹುಬ್ಬಳ್ಳಿಯ ಅಂಜಲಿ ಕೊಲೆ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ನಡೆದ ಕೊಲೆ ಹಾಗೂ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ಕಾನೂನು ರೀತಿಯಲ್ಲಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗಿ ಜೂನ್ 28ರಂದು ಜಿಲ್ಲಾಧಿಕಾರಿಯವರಿಗೆ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.