Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾIಜೇಸನ್ ಅವಿತ್ ಪಿರೇರಾ ಹೇಳಿದರು.

ಅವರು ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರ ಸಲಹೆ ಸೂಚನೆಗಳೊಂದಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನದಲ್ಲಿ ತೊಡಗಬೇಕು. ಆಗ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜೆಇಇ, ನೀಟ್ ಪರೀಕ್ಷಾ ತರಬೇತುದಾರ ಡಾ.ಶುತಕೀರ್ತಿ ಜೈನ್ ಉಪಸ್ಥಿತರಿದ್ದರು. ವಿಜ್ಞಾನ ಸಂಘದ ಸಂಯೋಜಕಿ ಸೌಜನ್ಯ ಸ್ವಾಗತಿಸಿದರು. ಉಪನ್ಯಾಸಕಿ ಕು.ರಾಜಶ್ರೀ ವಂದಿಸಿದರು. ಆಕಾಶ್ ಕಾರ್ಯಕ್ರಮ ನಿರೂಪಿಸಿದರು.

Exit mobile version