ಬೆಳ್ತಂಗಡಿ-ಚಾರ್ಮಾಡಿ ರಸ್ತೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಖಡಕ್ ವಾರ್ನಿಂಗ್ ನೀಡಿದ ಶಾಸಕ ಹರೀಶ್ ಪೂಂಜ

0

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು.

ಅದರೆ ಗುತ್ತಿಗೆದಾರರ ನಿಧಾನಗತಿ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ ಸೇರಿದಂತೆ ಜನ ಸಾಮಾನ್ಯರಿಗೆ ವಾಹನ ಸವಾರರಿಗೆ ಮತ್ತಷ್ಟು ತೊಂದರೆಯಾಗುತ್ತಿರುವ ಬಗ್ಗೆ ಮನಗಂಡು ರಾತ್ರೋರಾತ್ರಿ ಶಾಸಕ ಹರೀಶ್ ಪೂಂಜ ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರಲ್ಲದೇ ಗುತ್ತಿಗೆದಾರರ ನಿಧಾನಗತಿ ಕಾಮಗಾರಿ ಬಗ್ಗೆ ಅಸಮಾಧಾನಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಕೆಸರಿನಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿದೆ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಅಲ್ಲಲ್ಲಿ ಚರಂಡಿಯಲ್ಲಿ ನೀರು ನಿಂತಿರುವುದನ್ನು ಸರಿಪಡಿಸುವಂತೆ ಸೂಚಿಸಿದರು. ಭಾರೀ ಮಳೆಯ ನಡುವೆಯೂ ಶಾಸಕರು ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ತೆರಳಿ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಶಿವಪ್ರಸಾದ್ ಅಜಿಲ, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.ಶಾಸಕ ಹರೀಶ್ ಪೂಂಜಾರವರ ಪ್ರಯತ್ನದಲ್ಲಿ ತಡೆಬೇಲಿ ಆಗಿದೆ.

ಶಾಸಕ ಹರೀಶ್ ಪೂಂಜಾ ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಯಶವoತ್, ಸದಸ್ಯರಾದ ಕೃಷ್ಣಪ್ರಸಾದ್, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಸಾಮ್ರಾಟ್ ಇವರು ಸೂಕ್ತ ರೀತಿಯಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here