Site icon Suddi Belthangady

ಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ಮೊದಲನೇ ವರ್ಷಕ್ಕೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಓರಿಯಂಟೇಷನ್ ಕಾರ್ಯಕ್ರಮ ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಸಂತೋಷ್ ಇವರು ಕಾಲೇಜು ಮತ್ತು ಅವರ ಆಯ್ಕೆಯ ಕೋರ್ಸುಗಳ ಬಗ್ಗೆ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಿವಿಲ್ ವಿಭಾಗ ಮುಖ್ಯಸ್ಥೆ ತೃಪ್ತಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಮೇರಿ ಸ್ಮಿತಾ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ದಿನೇಶ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಉಪಸ್ಥಿತರಿದ್ದರು.

ಕಾರ್ಯಕ್ರಮ ಕಾಲೇಜಿನ ಪ್ರಾದ್ಯಾಪಕರುಗಳಾದ ಈಶ್ವರ್, ಸಾಯಿ ಚರಣ್ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಶಿವಪ್ರಸಾದ್ ಸ್ವಾಗತಿಸಿದರು.

ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.ಈಶ್ವರ್ ಶರ್ಮಾ ವಂದಿಸಿದರು.

Exit mobile version