ಜಿಲ್ಲಾಧಿಕಾರಿ ಆದೇಶದಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ವಿಪತ್ತು ನಿರ್ವಹಣಾ ಸಭೆ

0

ಅರಸಿನಮಕ್ಕಿ: ಜಿಲ್ಲಾಧಿಕಾರಿಯವರ ಆದೇಶದಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜು.2ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು.ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ, ಇಲಾಖೆಗಳಿಂದ ತಕ್ಷಣ ಕ್ರಮಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ನಿರ್ಧಾರಿಸಲಾಯಿತು.

ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ತಂಡದ ಸಭೆಯಲ್ಲಿ ಸೂಚಿಸಲಾಯಿತು.ಗ್ರಾಮದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳ್ಳಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ ಎಸ್ ಪಂಚಾಯತ್ ಅಬಿವೃದ್ದಿ ಅಧಿಕಾರಿ ಜಯರಾಜ್, ಗ್ರಾಮ ಆಡಳಿತಾಧಿಕಾರಿ ಕಾವ್ಯ, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನಾಗರಾಜ್ ಬುಡ್ರಿ ವಿನಯ ಪ್ರಸನ್ನ, ಗಸ್ತು ಅರಣ್ಯ ಪಾಲಕ ನಿಂಗಪ್ಪ ಆವರಿ, ಅರಸಿನಮಕ್ಕಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಂ ಕಟ್ಟೆ ಶಾಲಾ ಮುಖ್ಯೋಪಾಧ್ಯಾಯರಾದ ಅಶೋಕ, ಕುಂಟಾಲಪಲ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ, ಅಂಗನವಾಡಿ ಕಾರ್ಯಕರ್ತೆಯರಾದ ವಿಜಯ ಕೆ, ಭಾರತಿ, ಸತ್ಯಪ್ರಭಾ, ಸುನಂದಾ ಶೆರ್ಲಿ, ರಾಜಶ್ರೀ, ಶಾಂತ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದವರು, ಕೃಷಿ ಸಖಿ, ಪಶು ಸಖಿ, ಕೃಷಿ ಉದ್ಯೋಗ ಸಖಿ, ಎಲ್ ಸಿ ಆರ್ ಪಿ ಗಳು ಮತ್ತು ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here