Site icon Suddi Belthangady

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶರತ್ ಸಂತೋಷ್ ಪಿಂಟೋರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶರತ್ ಸಂತೋಷ್ ಪಿಂಟೋರವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜೂನ್ 28ರಂದು ಆಯೋಜಿಸಲಾಯಿತು.

ಶಾಲಾ ಸಂಚಾಲಕ ಅತೀ ವಂ.ಫಾ.ವಾಲ್ಟರ್ ಡಿಮೆಲ್ಲೋ ರವರು ಶಿಕ್ಷಕರ ಮುಂದಿನ ವೃತ್ತಿ ಜೀವನಕ್ಕೆ ಶುಭ ಹಾರೈಸಿ ಆಶೀರ್ವದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳಿಗೆ ಕ್ರೀಡೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಶಾಲೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಗುರುತಿಸಲು ಶ್ರಮವಹಿಸಿದಕ್ಕಾಗಿ ಶ್ಲಾಘಿಸಿದರು.

ಶಾಲಾ ಸಂಚಾಲಕರು ಮತ್ತು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಕ ವೃಂದದವರು ವಿದಾಯ ಗೀತೆಯನ್ನು ಹಾಡಿದರು. ಶರತ್ ರವರು ಶಾಲೆಯಲ್ಲಿ ತಾವು ಕಳೆದ ದಿನಗಳ ಸಿಹಿ ನೆನಪುಗಳನ್ನು ಹಂಚಿಕೊಂಡರು.

Exit mobile version