ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

0

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಜುಲೈ 2ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರಗಿತು. ಸಂಸ್ಥೆಯ ಸಂಚಾಲಕ ವಂ.ಫಾ.ಅಬೆಲ್ ಲೋಬೊ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಯಂ. ಪದವಿ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಂದನಾ ಜೈನ್ ಮಾತನಾಡಿ ವಿದ್ಯಾರ್ಥಿಗಳಗೆ ನಾಯಕತ್ವದ ಉಪಯೋಗ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೊ ನೂತನ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ವಿದ್ಯಾರ್ಥಿನಿ ರಫ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಟೀನಾ ಆಲ್ಫಾನ್ಸ ಧನ್ಯವಾದ ನೀಡಿದರು. ಹೆಝಲ್ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here