ಪೆರಿಂಜೆ: ಶ್ರೀ.ಧ.ಮ.ಅನುದಾನಿತ ಪ್ರೌಢಶಾಲೆ ಪೆರಿಂಜೆಯಲ್ಲಿ ವಿದ್ಯಾರ್ಥಿ ಸಂಸತ್ತು ಹಾಗು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಉಜಿರೆಯ ಶ್ರೀ.ಧ.ಮ.ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಕಲಾವತಿ ಮೇಡಂ ಮುಖ್ಯ ಅತಿಥಿಗಳಾಗಿದ್ದು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ವಿವಿಧ ಸಂಘಗಳ ವಾರ್ಷಿಕ ಕ್ರಿಯಾ ಯೋಜನೆಗಳ ಪ್ರಾತ್ಯಕ್ಷಿತೆಯನ್ನು ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಅವರು ಶಾಲೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವಕ್ಕೆ ಅಂಕವೊಂದೇ ಮಾನದಂಡ ಅಲ್ಲ. ಸಹಪಠ್ಯ ಚಟುಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಉತ್ತಮ ನಾಗರಿಕರಾಗಿ ಮೂಡಿಬರಲು ಸಾಧ್ಯ ಎಂದರು.
ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವಿದ್ಯಾರ್ಥಿ ನಾಯಕ ಸಂಬ್ರಾನ್, ಉಪನಾಯಕ ಸುಮಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಹರಿಪ್ರಸಾದ್ ಸ್ವಾಗತಿಸಿ, ಶಿಕ್ಷಕ ಸುಧೀರ್ ಧನ್ಯವಾದವಿತ್ತರು. ಜಯಂತಿ ನಿರ್ವಹಣೆ ಮಾಡಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.