ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ, ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

0

ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ ಉದಯ ಮಾಚಾರ್ ಇವರನ್ನು ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿಯ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಊರ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು, ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷ ಕಿಶೋರ್ ಪೆರ್ಲ, ಉಜಿರೆ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಯುವ ವಾಹಿನಿಯ ಬೆಳ್ತಂಗಡಿ ಘಟಕದ ನಿರ್ದೇಶಕರಾದ ಮನೋಜ್ ಕುಂಜರ್ಪ ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here