ಬೆಳ್ತಂಗಡಿ: ನಾಡಿನ ಹಿರಿಯ ಕವಿ, ಸಾಹಿತಿ ಪ್ರೊ.ಎನ್.ಜಿ.ಪಟವರ್ಧನ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವುಂಟಾಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೂರು ದಶಕಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು. ಅನೇಕ ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿ ಹುಟ್ಟುವಂತೆ ಮಾಡುವಲ್ಲಿ ಅವರ ಪಾತ್ರ ದೊಡ್ಡದಾಗಿತ್ತು. ಬೆಳ್ತಂಗಡಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ಅವರಿಗೆ ಪ್ರಾಪ್ತವಾಗಿತ್ತು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ನಮ್ಮನ್ನಗಲಿರುವ ಪ್ರೊ.ಎನ್.ಜಿ ಪಟವರ್ಧನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
p>