ಉಜಿರೆ: ಎನ್.ಎಸ್.ಎಸ್ ಸ್ವಯಂ ಸೇವಕರಿಂದ ಜಲ ಸಂರಕ್ಷಣೆಯ ಅರಿವು ಕಾರ್ಯಕ್ರಮ

0

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ (ಸ್ವಾಯತ್ತ) ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಜಲ ಸಂರಕ್ಷಣಾ ಅಭಿಯಾನವನ್ನು ಹಮ್ಮಿಕೊಂಡಿದ್ದರು.

ಜೂ.14 ರಿಂದ ಜೂ.23ರವರೆಗೆ 10 ದಿನಗಳ ಕಾಲ 12 ಶಾಲೆಗಳಿಗೆ ಹಾಗೂ ತಾಲೂಕಿನ ವಿವಿಧ ಗ್ರಾಮಗಳ 250 ಮನೆಗಳಿಗೆ ಭೇಟಿ ಕೊಡುವುದರ ಮೂಲಕ ಅಭಿಯಾನವನ್ನು ಸಾಕಾರಗೊಳಿಸಲಾಯಿತು.ಶ್ರೀ ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ, ದೊಂಪದಪಲ್ಕೆ ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ಬದನಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಂಡತ್ತೋಡಿ ಸರಕಾರಿ ಪ್ರಾಥಮಿಕ ಶಾಲೆ, ಬೆಳ್ತಂಗಡಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಮುಗುಳಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುದ್ಯಾಡಿ, ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ನಾವರ, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಿಲ್ಯ, ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಂದಾರು, ಮೈರೊಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಎನ್.ಎಸ್.ಎಸ್ ಸ್ವಯಂಸೇವಕರು ಭೇಟಿ ನೀಡಿ ಮಕ್ಕಳಿಗೆ ಜಲ ಸಂರಕ್ಷಣೆ ವಿಷಯದ ಮೇಲೆ ಚಟುವಟಿಕೆಗಳನ್ನು ಮೂಡಿಸುವುದರ ಮೂಲಕ ಪ್ರಾಯೋಗಿಕ ವಿವರಣೆಯನ್ನು ನೀಡಿ ಪ್ರತಿಜ್ಞಾವಿಧಿಯನ್ನು ಮಾಡಿಸಿ ಜಲ ಸಂರಕ್ಷಣೆಯ ಮಹತ್ವ ಅದಕ್ಕೆ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳನ್ನು ತಿಳಿಸಿದರು.

ತಾಲೂಕಿನ ಗ್ರಾಮಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಗ್ರಾಮಸ್ಥರನ್ನು ಭೇಟಿಯಾಗಿ ಜಲ ಸಂರಕ್ಷಣಾ ಅಭಿಯಾನದ ಕರ ಪತ್ರವನ್ನು ನೀಡಲಾಯಿತು.ಈ ಮೂಲಕ ಸರಳವಾಗಿ ಮತ್ತು ವಿಶಿಷ್ಟ ರೀತಿಯಲ್ಲಿ ಯುವ ಮನಸ್ಸುಗಳಲ್ಲಿ ಹಾಗೂ ಪ್ರಜೆಗಳಲ್ಲಿ ಅರಿವನ್ನು ಮೂಡಿಸಿ ತಿಳುವಳಿಕೆಯ ಬೀಜ ಬಿತ್ತಿ ಹೊಸ ಚಿಗುರಿಗೆ ದಾರಿ ಮಾಡಿಕೊಡಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, ಎನ್. ಎಸ್. ಎಸ್ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್ ಮತ್ತು ಪ್ರೊ.ದೀಪಾ ಆರ್.ಪಿ ಇವರ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.

LEAVE A REPLY

Please enter your comment!
Please enter your name here