ಬೆಳ್ತಂಗಡಿ: ಲೋಕಸಭಾ ಚುನಾವಣಾ ಕರ್ತವ್ಯದ ನಿಮಿತ್ತ ಕಾರ್ಕಳ ಟೌನ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ ಕದ್ರಿ ಮತ್ತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯಕ್ಕೆ ಜು.3ರಂದು ಹಾಜರಾಗಿದ್ದಾರೆ.
ಚುನಾವಣಾ ಕರ್ತವ್ಯದ ಸಂದರ್ಭದಲ್ಲಿ ವರ್ಗಾವಣೆಗೊಂಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ವಸಂತ ಆಚಾರ್ ಗೋಕರ್ಣ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.