ಬೆಳ್ತಂಗಡಿ: ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ನೀಡಿದ್ದಾರೆ.