ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಉಜಿರೆಯ ಶಾರದ ಕಲ್ಯಾಣ ಮಂಟಪದಲ್ಲಿ ರಬ್ಬರ್ ಟ್ಯಾಪರ್ ಸಂಘದ ಉದ್ಘಾಟನಾ ಕಾರ್ಯಕ್ರಮ ಮತ್ತು ಬಿಎಂಎಸ್ ಸ್ಥಾಪನ ದಿನದ ಅಚರಣೆಯ ಕುರಿತು ಪೂರ್ವ ತಯಾರಿ ಬಗ್ಗೆ ಸಭೆ ನಡೆಸಲಾಯಿತು.
ಬಿಎಂಎಸ್ ರಾಜ್ಯ ಕಾರ್ಯದರ್ಶಿ ಹಾಗೂ ಸಂಘದ ಗೌರವ ಸಲಹೆಗಾರರಾಗಿರುವ ಜಯರಾಜ್ ಸಾಲಿಯಾನ್ ರವರು ಪ್ರಸ್ತಾವಿಕವಾಗಿ ಮಾತಾಡಿದರು ಹಾಗೂ ಬಿಎಂಎಸ್ ರಬ್ಬರ್ ಟ್ಯಾಪರ್ ಸಂಘದ ಜಿಲ್ಲಾಧ್ಯಕ್ಷ, ವಕೀಲ ಅನಿಲ್ ಕುಮಾರ್ ಇದರ ಬಗ್ಗೆ ಸಲಹೆ ನೀಡಿದರು.
ಈ ಕಾರ್ಯಕ್ರಮಕ್ಕೆ ಬಿಎಂಎಸ್ ನ ಜಿಲ್ಲಾಧ್ಯಕ್ಷರು ಹಾಗೂ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಅಧ್ಯಕ್ಷರಾದ ಅನಿಲ್ ಕುಮಾರ್ ಹಾಗೂ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಹಾಗೂ ಬಿ ಎಂ ಎಸ್ ನ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಚಾರ್, ಬಿಎಂಎಸ್ ತಾಲೂಕು ಅಧ್ಯಕ್ಷ ಉದಯ್ ಬಿ.ಕೆ ವಕೀಲರು ಹಾಗೂ ಬಿ ಎಂ ಎಸ್ ನ ಕಟ್ಟಡ ವಿಭಾಗದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್, ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಶಶಿಕುಮಾರ್ ರವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ರಬ್ಬರ್ ಟ್ಯಾಪ್ಪರ್ಸ್ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.ಅರುಣ್ ವರ್ಧನ್ ಸ್ವಾಗತಿಸಿದರು ಹಾಗೂ ಜಿಲ್ಲಾ ಉಪಾಧ್ಯಕ್ಷ ನಾಗೇಶ್ ಬಿ ನೆರಿಯ ಇವರು ಧನ್ಯವಾದ ನೀಡಿದರು.