Site icon Suddi Belthangady

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಮಂತ್ರಿ ಮಂಡಲ ಉದ್ಘಾಟನೆ

ಬೆಳ್ತಂಗಡಿ: ಸಂತ ತೆರೇಸಾ ಸಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ವಿಭಾಗದ ಉಪನ್ಯಾಸಕಿ ಝೀಟಾರವರ ಮಾರ್ಗದರ್ಶನದಲ್ಲಿ ಮಂತ್ರಿ ಮಂಡಲವನ್ನು ಜು.01ರಂದು ಉದ್ಘಾಟಿಸಲಾಯಿತು.

ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಅಕ್ಷತಾರವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ಮಂತ್ರಿ ಮಂಡಲದ ಬಗ್ಗೆ ಮಾಹಿತಿಯನ್ನು ನೀಡಿದರು.ಮಂತ್ರಿ ಮಂಡಲಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಆರೋಗ್ಯರವರು ಪ್ರಮಾಣವಚನ ಬೋಧಿಸಿ ಪದಾಧಿಕಾರಿಗಳಿಗೆ ಕರ್ತವ್ಯಗಳನ್ನು ಮನದಟ್ಟು ಮಾಡಿಸಿದರು ಕಾಲೇಜಿನ ನಾಯಕಿ ಕುಮಾರಿ ಗೀತಾ ಹಾಗೂ ಉಪನಾಯಕಿ ಸುಬನ್ಯ ತನ್ನ ಕರ್ತವ್ಯವನ್ನು ಚಾಚು ತಪ್ಪದೇ ನಿರ್ವಹಿಸುತ್ತೇವೆ ಮಾತ್ರವಲ್ಲದೆ ಕಾಲೇಜಿನ ಉನ್ನತಿಗೆ ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು ಹಾಗೂ ವಿದ್ಯಾರ್ಥಿಗಳ ಸಹಕಾರವನ್ನು ಕೋರಿದರು.

ಆಂಗ್ಲ ವಿಭಾಗದ ಉಪನ್ಯಾಸಕಿ ಕುಮಾರಿ ನ್ಯಾನ್ಸಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Exit mobile version