ಬೆಳ್ತಂಗಡಿ: ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ಜು.4ರ ಸಂಜೆ ತೆಕ್ಕಾರು ಗ್ರಾಮದ ಗಡಿಭಾಗದ ಬಂಟ್ವಾಳ ತಾಲೂಕಿನ ಕುಟೇಲು ಸೇತುವೆ ಸಮೀಪ ನಡೆದಿದೆ.
ಸುರತ್ಕಲ್ ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಜು.04ರಂದು ಸಂಜೆ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದು ಮೀನು ಹಿಡಿಯುತ್ತಿರುವ ವೇಳೆ ಮೈಕಲ್ (53ವ) ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ದಾರೆ.ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ ನಂತರ ಬಂಟ್ವಾಳ ಅಗ್ನಿಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸಿದರೂ ನೀರಿನ ಹರಿವು ಹೆಚ್ಚಾಗಿದ್ದರಿಂದ ಹಾಗೂ ಕತ್ತಲದ್ದರಿಂದ ಕಾರ್ಯಾಚರಣೆಗೆ ತೊಂದರೆಯಾಗಿದ್ದು ಇಂದು ಮತ್ತೆ ಹುಡುಕಾಟ ನಡೆಸಲಾಗಿದ್ದು ಶವ ಪತ್ತೆಯಾಗಿದೆ.ಸ್ಥಳದಲ್ಲಿ ಉಪ್ಪಿನಂಗಡಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
ತೆಕ್ಕಾರು ಗ್ರಾ.ಪಂ.ನಿಂದ ನಾಮಫಲಕ ಅಳವಡಿಕೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಗಿದ್ದು ನದಿ ಅಪಾಯಕಾರಿ ರೀತಿಯಲ್ಲಿ ಹರಿಯುತ್ತಿದ್ದು ಸಾರ್ವಜನಿಕರು ನದಿಗೆ ಇಳಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕುಟೇಲು ಸೇತುವೆ ಬಳಿ ನಾಮಫಲಕ ಅಳವಡಿಸಿದೆ.