ಮಂಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ನಾಳೆ (ಜು.6) ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ.
ಜುಲೈ 5ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 6ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
p>