ಕಾಯರ್ತಡ್ಕ: ಕಾಯರ್ತಡ್ಕ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 5ರಂದು ವಿವಿಧ ಕ್ಲಬ್ ಗಳ ಉದ್ಘಾಟನೆ ನಡೆಯಿತು.
ಕ್ಲಬ್ ಗಳ ಉದ್ಘಾಟನೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕ ಇಲ್ಲಿನ ನಿವೃತ್ತ ಶಿಕ್ಷಕಿ ಶ್ರೀಮತಿ ಮೇರಿ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಇದೇ ಶಾಲೆಯ ಹಿರಿಯ ವಿದ್ಯಾರ್ಥಿ ಡಾರ್ವಿನ್ ಜೋಸೆಫ್ ಭಾಗವಹಿಸಿದ್ದರು.
ಇಕೋ ಕ್ಲಬ್, ಸಾಹಿತ್ಯ ಕ್ಲಬ್, ವಿಜ್ಞಾನ ಕ್ಲಬ್ ಹಾಗೂ ಮಾನವ ಹಕ್ಕುಗಳ ಕ್ಲಬ್ ಗಳ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಮೇರಿ ಅವರು ಮಕ್ಕಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾರ್ವಿನ್ ಜೋಸೆಫ್ ಶಾಲೆಯಲ್ಲಿ ವಿವಿಧ ಕ್ಲಬ್ ಗಳ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳು ಅವುಗಳಲ್ಲಿ ಪಾಲ್ಗೊಂಡು ತಮ್ಮ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಬೇಕೆಂದು ವಿವರಿಸಿದ್ದರು.
ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಂಡು ಪರಿಪೂರ್ಣ ವಿಧ್ಯಾರ್ಥಿಗಳಾಗಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕಿ ಸಿಸ್ಟರ್ ಮರ್ಸಿ ಚೆರಿಯನ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ದಿವ್ಯ ಮರಿಯ ಎಸ್.ಎಚ್ ಉಪಸ್ಥಿತರಿದ್ದರು.
ನಂತರ ವಿವಿಧ ಕ್ಲಬ್ಬುಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಕ್ಕಳು ಲವಲವಿಕೆಯಿಂದ ಪಾಲ್ಗೊಂಡು ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಮಕ್ಕಳೇ ನಿರ್ವಹಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.