ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪ್ರತಿಕಾ ದಿನಾಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪ್ರತಿಕಾ ದಿನಾಚರಣೆ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ಜು.6ರಂದು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು.
ಬೆಂಗಳೂರಿನ ಇಸ್ರೋದ ಹಿರಿಯ ವಿಜ್ಞಾನಿ ಪಿ.ವಾಸುದೇವ ರಾವ್, ಬೆಂಗಳೂರು ಪ್ರಜಾವಾಣಿ ದಿನ ಪತ್ರಿಕೆ, ಸುಧಾ ವಾರಪತ್ರಿಕೆಯ ಮುಖ್ಯ ಉಪ ಸಂಪಾದಕ ಉಮಾ ಅನಂತ್,
ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಭಾಸ್ಕರ್ ಹೆಗ್ಡೆ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಮತ್ತು
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

2023-24ನೇ ಶೈಕ್ಷಣಿಕ ಸಾಲಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ.ಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಮೆಘಾನ ಮತ್ತು ಮಚ್ಚಿನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಜಿಯಾದ್ ಅವರನ್ನು ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here