Site icon Suddi Belthangady

ನಾವೂರು ಗ್ರಾಮ ಪಂಚಾಯತ್ ದ್ವಿತೀಯ ಸುತ್ತಿನ ಗ್ರಾಮ ಸಭೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದರವರ ಅಧ್ಯಕ್ಷತೆಯಲ್ಲಿ ಜು.8 ರಂದು ನಾವೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಹಾಯಕ ನಿರ್ದೇಶಕರು ತಾರಾಕೇಸರಿ ನಡೆಸಿದರು.
ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾ.ಪಂ. ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಸರಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮಸ್ಥರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು. ಹಾಗೂ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
ಶಾಲಾ ಮಕ್ಕಳು ನಾಡಗೀತೆ ಹೇಳಿದರು. ಸಿಬಂದಿಗಳು ಜಮಾ-ಖರ್ಚು ಹಾಗೂ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು.

ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ನಿರೂಪಿಸಿ, ಅನುಪಾಲನಾ ವರದಿ ವಾಚಿಸಿದರು.

Exit mobile version