ಬೆಳ್ತಂಗಡಿ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜು. 8ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿ ಉಮಾಪತಿ, ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ಶ್ರೀ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹನುಮಂತರಾಯಪ್ಪ, ಕುಕ್ಕುಟ ಮಹಾ ಮಂಡಳಿ ಅಧ್ಯಕ್ಷ ಮೂಡ್ಯಾ ಚಂದ್ರು ನಿರ್ದೇಶಕರುಗಳಾದ ಶ್ರೀ ಪುಟ್ಟಸ್ವಾಮಿ, ಡಾಕ್ಟರ್ ಆಂಜನಪ್ಪ ಹಾಗೂ ರಘುಗೌಡ ಹಾಸನ ಜೊತೆಗಿದ್ದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ಅಭಿನಂದಿಸಲಾಯಿತು. ಶಾಸಕ ಹರೀಶ್ ಪೂಂಜ ಸಂಘದ ಪದಾಧಿಕಾರಿಗಳನ್ನು ಗೌರವಿಸಿದರು.