Site icon Suddi Belthangady

ಪಡಂಗಡಿ ಗ್ರಾಮದ ಪೊಂಜಿಲದಲ್ಲಿ ಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಎಸ್‌ಡಿಪಿಐ ವತಿಯಿಂದ ಮನವಿ

ಬೆಳ್ತಂಗಡಿ: (ಜು.8) ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪಡಂಗಡಿ ಗ್ರಾಮದ ಪೊಂಜಿಲ ಎಂಬಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ, ನೀರು ರಸ್ತೆಯಲ್ಲಿ ಹೋಗುತ್ತಿದ್ದು ಇದರಿಂದ ಜನಸಾಮಾನ್ಯರಿಗೆ, ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ತಾಲೂಕು ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶದ ಜನರು ಹೋಗಲು ಹೆದರುತ್ತಿದ್ದಾರೆ.

ಆದುದರಿಂದ ಪಂಚಾಯತ್ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿ ಪಡಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಎಸ್‌ಡಿಪಿಐ ಪಡಂಗಡಿ ಬೂತ್ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಡಂಗಡಿ ಬೂತ್ ಸಮಿತಿ ಪದಾಧಿಕಾರಿಗಳಾದ ಮನ್ಸೂರ್ ಕನ್ನಡಿ ಕಟ್ಟೆ, ಲತೀಫ್ ಕನ್ನಡಿ ಕಟ್ಟೆ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದ್ದಾರೆ.

Exit mobile version