ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2024- 25 ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆ ಜು. 9 ರಂದು ಉಜಿರೆ ಶಾರದಾ ಮಂಟಪದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಎ. ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು, ಸಿಬ್ಬಂದಿಗಳು ಹಾಜರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯನ್ನು ಮಂಡಿಸಿದರು.
ಗ್ರಾಮ ಸಭೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಶೇ.100 ಫಲಿತಾಂಶ ಪಡೆದ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಢ ಶಾಲೆಗಳಾದ ಬದನಾಜೆ ಸರಕಾರಿ ಹೈಸ್ಕೂಲ್ ನ ವಿದ್ಯಾರ್ಥಿನಿ ವೈಷ್ಣವಿ ಹಾಗೂ ಹಳೆಪೇಟೆ ಸರಕಾರಿ ಹೈಸ್ಕೂಲ್ ನ ಸಮೀಮಾ ಇವರನ್ನು ಗೌರವಿಸಲಾಯಿತು.ಹಾಗೂ ಶಾಲೆಗೆ ತಲಾ 50 ಸಾವಿರ ರೂ. ವೆಚ್ಚದ ವಿಜ್ಞಾನ ಪ್ರಯೋಗಾಲಯ ಸಲಕರಣೆಗಳ ಕಿಟ್ ನೀಡಲಾಯಿತು. 8 ಮಂದಿ ಎಸ್ ಸಿ, ಎಸ್ ಟಿ ಫಲಾನುಭವಿಗಳಿಗೆ ಸಹಾಯಧನ, ವಿಕಲಚೇತನರಿಗೆ ವೈದ್ಯಕೀಯ ಪರಿಹಾರ, ಒಂದು ವೀಲ್ ಚೇರ್ ವಿತರಿಸಲಾಯಿತು.