Site icon Suddi Belthangady

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ವಿದ್ಯಾರ್ಥಿ ಜೀವನ ಬದುಕಿನ ವಿಶೇಷ ಮೈಲಿಗಲ್ಲಾಗಿದ್ದು, ಈ ಸಂದರ್ಭದಲ್ಲಿ ಸದ್ಗುಣಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಉದಯವಾಣಿ ಪತ್ರಿಕೆಯ ಹಿರಿಯ ವರದಿಗಾರ ರಾಕೇಶ್ ಕುಂಜೂರು ಕಾಪು ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ 2024- 25 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡುತ್ತಾ, ಶೈಕ್ಷಣಿಕ ವರ್ಷದಲ್ಲಿ ಸಿಗುವ ಉತ್ತಮ ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು. ಸತ್ಯ, ಪ್ರಾಮಾಣಿಕತೆ, ಮಾನವೀಯತೆಯನ್ನು ರೂಢಿಸಿಕೊಂಡು ಸೃಜನಶೀಲರಾಗಿ ಬಾಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅನುರಾಧ ಕೆ. ರಾವ್ ವಿದ್ಯಾರ್ಥಿ ಸಂಘವನ್ನು ಪರಿಚಯಿಸಿದರು. ಬೆಳಿಯಪ್ಪ ಕೆ. ಪ್ರಮಾಣವಚನ ಬೋಧಿಸಿದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ವಂದಿಸಿದರು. ಉಪನ್ಯಾಸಕ ಸುಧೀರ್ ಕೆ. ಎನ್ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಕ್ಷ ಸಾತ್ವಿಕ್, ಉಪಾಧ್ಯಕ್ಷ ಆದಿತ್ಯ, ಕಾರ್ಯದರ್ಶಿ ಸದ್ವೀತ್ ಕುಮಾ‌ರ್ ಎನ್ ಭಂಡಾರಿ, ಜಂಟಿ ಕಾರ್ಯದರ್ಶಿ ಸುದರ್ಶನ್, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ರಿತಿಶಾ ಮತ್ತು ತೇಜಸ್, ಕ್ರೀಡಾ ಕಾರ್ಯದರ್ಶಿಗಳಾದ ಅಭಿನವ್ ವಿ ಕೆ ಮತ್ತು ನವೀನ್ ಪಿಂಟೋ, ಮಹಿಳಾ ಕಲ್ಯಾಣ ಕಾರ್ಯದರ್ಶಿಗಳಾದ ಶಿವಾನಿ ಎಸ್.ಜೆ., ಸಾಹಿತಿ ಕುಶಾಲ್, ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version