ಗುರುವಾಯನಕೆರೆ: ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಗಾರ

0

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಆಂಗ್ಲ ಭಾಷೆ ಉಪನ್ಯಾಸಕರ ಸಂಘದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವು ದಕ್ಷಿಣ ಕನ್ನಡ ಜಿಲ್ಲೆ ಪ್ರಾಂಶುಪಾಲರ ಸಂಘ ಹಾಗೂ ಗುರುವಾಯನಕೆರೆ ವಿದ್ವತ್ ಪದವಿ ಪೂರ್ವ ಕಾಲೇಜು ಇವರ ಸಹಭಾಗಿತ್ವದಲ್ಲಿ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಜು.11ರಂದು ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲ ಸಂಘದ ಅಧ್ಯಕ್ಷ ಜಯಾನಂದ ಎನ್.ಸುವರ್ಣ ಇವರು ವಹಿಸಿಕೊಂಡು, ಉಪನ್ಯಾಸಕರ ಸಂಘ ಚಟುವಟಿಕೆಯುಕ್ತವಾಗಿರಬೇಕು ಹಾಗೂ ಇಂತಹ ಕಾರ್ಯಗಾರವು ಉಪನ್ಯಾಸಕರ ವೃತ್ತಿಗೆ ಪೂರಕವಾಗುತ್ತದೆ ಎಂದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ವಿದ್ವತ್ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥ ಸುಭಾಷ್ ಚಂದ್ರ ಶೆಟ್ಟಿ ಇವರು ಮಾತನಾಡಿ, ತಮ್ಮ ಸಂಸ್ಥೆಯಲ್ಲಿ ಈ ಅವಕಾಶ ನೀಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷರಾದ ಸೋಮಶೇಖರ್ ನಾಯಕ್, ಪ್ರಾಂಶುಪಾಲರು, ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಸುಬ್ರಮಣ್ಯ ಇವರು ಪ್ರಸ್ತಾವನೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ ವಿದ್ವತ್ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಕಾಶೀನಾಥ್ ಮತ್ತು ಪ್ರಾಂಶುಪಾಲ ಡಾ.ಜಯೇಂದ್ರ ಬದ್ಯಾನ್ ಮತ್ತು ಉಪನ್ಯಾಸಕರ ಸಂಘದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇವರು ಉಪಸ್ಥಿತತರಿದ್ದರು.

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜುನ ಉಪನ್ಯಾಸಕ ವಿಕಾಸ್ ಹೆಬ್ಬಾರ್ ಇವರು ಸ್ವಾಗತಿಸಿದರು. ತರಬೇತಿ ಸಂಯೋಜಕಿ ಅನುರಾಧ ಕೆ.ರಾವ್ ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇವರು ನಿರೂಪಿಸಿ, ಉಪನ್ಯಾಸಕ ಅಬ್ದುಲ್ ಸಮಾದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಗಾಂಧಿನಗರ ಸುಳ್ಯ ಇವರು ವಂದಿಸಿದರು.

ಕಾರ್ಯಕ್ರಮದ ಬಳಿಕ ವಿವಿಧ ವಿಷಯಗಳಲ್ಲಿ ಕಾರ್ಯಗಾರವು ನಡೆಯಿತು. ವಿದ್ವತ್ ಕಾಲೇಜಿನ ಮುಖ್ಯಸ್ಥ ಸುಭಾಷ್ ಚಂದ್ರ ಶೆಟ್ಟಿ ಹಾಗೂ ವಿವಿಧ ಸಾಧನೆಗೈದವರನ್ನು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

p>

LEAVE A REPLY

Please enter your comment!
Please enter your name here