ಕಡಿರುದ್ಯಾವರ: ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮ ಸಭೆ

0

ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ರತ್ನವತಿರವರ ಅಧ್ಯಕ್ಷತೆಯಲ್ಲಿ ಜು.12ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತೀಮ ನಡೆಸಿದರು.

ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸಾವಿತ್ರಿ, ಗ್ರಾ.ಪಂ. ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮಸ್ಥರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು. ಹಾಗೂ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.

ಸಿಬಂದಿಗಳು ಜಮಾ -ಖರ್ಚು ಹಾಗೂ ಕಾರ್ಯದರ್ಶಿ ಜನಾರ್ದನ್ ಗೌಡ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ ನಿರೂಪಿಸಿ, ಸ್ವಾಗತಿಸಿದರು.

LEAVE A REPLY

Please enter your comment!
Please enter your name here