Site icon Suddi Belthangady

ಉಜಿರೆ: ವಿಶ್ವ ಜನಸಂಖ್ಯಾ ದಿನಚಾರಣೆ

ಉಜಿರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಕಛೇರಿ, ತಾಲೂಕು ಪಂಚಾಯತ್, ಉಜಿರೆ ಗ್ರಾಮ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ಸಂಸ್ಥೆಯ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಜು.12ರಂದು ಬೆಳಾಲು ಕ್ರಾಸ್ ಉಜಿರೆ ಮಂಜುಶ್ರೀ ಬಿಲ್ಡಿಂಗ್‌ನ ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾ ಕಿರಣ್ ಜನಸಂಖ್ಯೆ ಅಧಿಕಾವಾಗುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ ಎಂದರು. ಮುಖ್ಯ ಅತಿಥಿ ಡಾ| ಸತೀಶ್ಚಂದ್ರ ಎಸ್ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶದ ಏಳಿಗಗೆ ಇನಷ್ಟು ಸಹಕಾರ ನೀಡಿದ್ದಂತಗುತ್ತದೆ. ಸರಕಾರ, ಇಲಾಖೆ ಬಹಳ ಪ್ರಮುಖ್ಯತೆವುಳ್ಳ ಕಾರ್ಯಕ್ರಮವನ್ನು ಆಯೋಜಿಸಿ ಯುವ ಜನೆತೆಗೆ ಅರಿವು ಮೂಡಿಸುತ್ತಿರುವುದು ಉತ್ತಮ ಕಾರ್ಯ. ಇಂದು ನಮ್ಮ ದೇಶ ಜಗತ್ತಿನ ಪ್ರಬಲ ದೇಶಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ನುಡಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ದೀಪಾಪ್ರಭು ಮಾತನಾಡಿ, ಜನಸಂಖ್ಯೆ ನಿಯಂತ್ರಣದಿಂದ ದೇಶ ಅಭಿವೃದ್ಧಿ ಆಗುತ್ತದೆ. ಸಮಾಜದ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದರು.

ವೇದಿಕೆಯಲ್ಲಿ ಇಓ ತಾರಕೇಸರಿ, ಉಜಿರೆ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಪ್ರಾಂಶುಪಾಲ ಸ್ವಾಮಿ ಕೆ.ಎ., ತಾಲೂಕು ಆರೋಗ್ಯಾಧಿಕಾರಿ ಪ್ರಭಾರ ಡಾ.ಸೌಜನ್ಯ, ತಾಲೂಕು ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ರಶ್ಮಿ ಉಜಿರೆ ಶ್ರೀ.ಧ.ಮಂ.ಮಹಿಳಾ ಕೈಗಾರಿಕಾ ಸಂಸ್ಥೆಯ ಪ್ರಾಂಶುಪಾಲ ವಿ.ಪ್ರಕಾಶ್ ಕಾಮತ್ ಹಾಗೂ ಡಾ.ಮಂಜು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸ್ವಾಗತಿಸಿ, ಕಾರ್ಯಕ್ರಮ ವ್ಯವಸ್ಥಾಪಕ ಅಜಯ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version