


ಶಿಬರಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿಜಿಸ್ಟರ್ಡ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಧರ್ಮಸ್ಥಳ ವಲಯದ ಕಳೆಂಜ ಬಿ ಕಾರ್ಯಕ್ಷೇತ್ರದ ಶಿಬರಾಜೆಯಲ್ಲಿ ವಾಸಿಸುತ್ತಿರುವ ಎಲಿಯಮ್ಮ ರವರಿಗೆ ಪ್ರತಿ ತಿಂಗಳು 1000/- ದಂತೆ ಮಾಶಾಸನವನ್ನು, ಮಂಜುರಾತಿ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಇದರ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಭವಾನಿಯವರು ಉಪಸ್ಥಿತರಿದ್ದರು.