ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 12ರಂದು ವನಮಹೋತ್ಸವವನ್ನು ಆಚರಿಸಲಾಯಿತು. ಪರಿಸರ ಸಂಘದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು. ಅನ್ಸಿಟಾ ಲಸ್ರಾದೋ ವನಮಹೋತ್ಸವದ ಪ್ರಾಮುಖ್ಯತೆಯ ಕುರಿತು ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ವಂ.ಫಾ.ಕ್ಲಿಫರ್ಡ್ ಪಿಂಟೋರವರು ವನಮಹೋತ್ಸವದ ಧ್ಯೋತಕವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು. ಪರಿಸರ ಸಂಘದ ವಿದ್ಯಾರ್ಥಿಗಳು ಶಿಕ್ಷಕರ ಜೊತೆಗೂಡಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಪ್ರತಿಜ್ಞೆಯನ್ನು ಮಾಡಿದರು.
ವಿದ್ಯಾರ್ಥಿನಿ ಸುಝಾನ ಸೆರಾವೋ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ರೆನಿಟಾ ಲಸ್ರಾದೋ ಮತ್ತು ಕು ವಿದ್ಯಾಶ್ರೀ ಹಾಗೂ ಸಂಘದ ನಾಯಕರಾದ ಜಾನಿಸ್ ಡಿ’ಸೋಜ ಮತ್ತು ಲೆವಿನ್ ಡಿ’ಸೋಜ ಸಹಕರಿಸಿದರು.