Site icon Suddi Belthangady

ವೇಣೂರು: ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ಉಪಾಧ್ಯಕ್ಷರಾಗಿ ಉಮೇಶ್ ಎನ್ ಆಯ್ಕೆ

ವೇಣೂರು: ವೇಣೂರು ಗ್ರಾಮ ಪಂಚಾಯತಿನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ವೇಣೂರು ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ಅವಧಿ ಕೊನೆಗೊಂಡಿದ್ದು 2ನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷರು ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿ ಯಾಗಿದ್ದು ಇಲ್ಲಿ ಎಲ್ಲಾ 24 ಸದಸ್ಯರು ಭಾರತೀಯ ಜನತಾ ಪಾರ್ಟಿ ಬೆಂಬಲಿತರಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 4 ಸದಸ್ಯರುಗಳಾದ ವೀಣಾ ದೇವಾಡಿಗ, ಲೀಲಾವತಿ ಬಜಿರೆ, ಶಂಭಾಷಿಣಿ ಮತ್ತು ಮಲ್ಲಿಕಾ ಕಾಶಿನಾಥ್ ಹೆಗ್ಡೆ ಆಕಾಂಕ್ಷಿಗಳಾಗಿದ್ದರು.ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಲೋಕಯ್ಯ ಪೂಜಾರಿ ಮತ್ತು ಉಮೇಶ್ ಎನ್. ಆಕಾಂಕ್ಷಿಗಳಾಗಿದ್ದು, ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಪ್ರಕ್ರಿಯೆ ನಡೆಸಿದರು. ಆಡಳಿತಧಿಕಾರಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವಿ ಕುಮಾರ್, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ನಿಕಟ ಪೂರ್ವ ಅಧ್ಯಕ್ಷ ನೇಮಯ್ಯ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷೆ ಪುಷ್ಪಾ ಡಿ. ಪಂಚಾಯತ್ ಸದಸ್ಯರು ಹಾಜರಿದ್ದರು. ಸದಸ್ಯ ಸುಂದರ ಹೆಗ್ಡೆ ಕೃತಜ್ಞತೆ ಸಲ್ಲಿಸಿದರು.

ಬಳಿಕ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಪಕ್ಷದ ವತಿಯಿಂದ ಅಭಿನಂದಿಸಿದರು.

Exit mobile version