ಗುರುವಾಯನಕೆರೆ: ಎಕ್ಸೆಲ್ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಆಶಿತಾಗೆ ರಾಷ್ಟ್ರ ಮಟ್ಟದ ಸಿಇಇ ಯಲ್ಲಿ 8ನೇ ಹಾಗೂ ರಾಜ್ಯದಲ್ಲಿ 2ನೇ ರ‍್ಯಾಂಕ್

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ಅವರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್ ಸಿ ಆರ್ ಟಿ ಸಿ) ನಡೆಸಿದ ರಾಷ್ಟ್ರ ಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ 8ನೇ ರ‍್ಯಾಂಕ್ ಹಾಗೂ ರಾಜ್ಯ ಮಟ್ಟದಲ್ಲಿ 2ನೇ ರ‍್ಯಾಂಕ್ ಗಳಿಸುವ ಮೂಲಕ, ಮತ್ತೊಮ್ಮೆ ಎಕ್ಸೆಲ್ ನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಿದೆ.

ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here