ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here