Site icon Suddi Belthangady

ವೇಣೂರು: ಗ್ರಾ.ಪಂ. ಆಡಳಿತಾಧಿಕಾರಿಯಾಗಿದ್ದ ಪಶು ವೈದ್ಯಾಧಿಕಾರಿ ಡಾ.ರವಿ ಯವರಿಗೆ ಸನ್ಮಾನ

ವೇಣೂರು: ವೇಣೂರು ಗ್ರಾಮ ಪಂಚಾಯತಿನ ಅಧ್ಯಕ್ಷ, ಉಪಾಧ್ಯಕ್ಷರ ಮೊದಲನೇ ಅವಧಿ ಮಾರ್ಚ್ ತಿಂಗಳಿಗೆ ಮುಗಿದಿದ್ದು ಹೊಸ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಜು.15ರವರೆಗೆ ಪಂಚಾಯತ್ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ.ರವಿ ಯವರಿಗೆ ಜು.15ರಂದು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಪಂಚಾಯತ್ ನೂತನ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ನೂತನ ಉಪಾಧ್ಯಕ್ಷ ಉಮೇಶ್ ಎನ್., ನಿಕಟಪೂರ್ವ ಅಧ್ಯಕ್ಷ ನೇಮಯ್ಯ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷೆ ಪುಷ್ಪಾ ಡಿ., ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು.

ಪಂಚಾಯತ್ ಸಿಬ್ಬಂದಿ ನಾರ್ಣಪ್ಪ ಗೌಡ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.

Exit mobile version