Site icon Suddi Belthangady

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜು.14ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಡಾ.ಅಪೂರ್ವ ದಂತವೈದ್ಯರು, ಡಾ.ಅಝ್‌ಮಾಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 140ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಯೆನೆಪೋಯ ಸಂಸ್ಥೆಯ ವೈದ್ಯಕೀಯ ಶಿಬಿರದ ಸಂಯೋಜಕಿ ಗಾಯತ್ರಿ ವಿ.ಪಿ.ಯವರು, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಗೋಪಿಕೃಷ್ಣರವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Exit mobile version