ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚಾರಣೆ ಕ್ಷೇತ್ರದ ಶಾಖಾ ಮಠ ಭಟ್ಕಳದ ಕರಿಕಲ್ ನಲ್ಲಿ ಜು.21ರಿಂದ ಆ.30ರವರೆಗೆ ನಡೆಯಲಿದೆ ಎಂದು ಜು.16ರಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿ ಹೇಳಿದರು.ಭಟ್ಕಳ ನಾಮಧಾರಿ ಸಮಾಜ ಭಾಂದವರು, ಶಿಷ್ಯ ವೃಂದ ಮತ್ತು 8ತಾಲೂಕಿನಲ ಇತರ ಸಮಾಜದ 8 ತಾಲೂಕಿನವರ ಸಹಕಾರದಲ್ಲಿ 4ನೇ ವರ್ಷದ ಚಾರ್ತುಮಾಸ್ಯ ವೃತ ನಡೆಯಲಿದೆ. ಈ ಸಂದರ್ಭದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣವನ್ನು ತೋರಿಸಲಾಗುವುದು ಎಂದರು.
ನಿವೃತ್ತ ಎಸ್ ಪಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ ಕಾರ್ಯಕ್ರಮದ ವಿವರ ನೀಡಿ ಜು.21ರಂದು ಗುರುಪೂರ್ಣಿಮೆಯಂದು ಬೆಳಿಗ್ಗೆ ಚಾತುರ್ಮಾಸ್ಯ ವೃತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ವೈದಿಕ ವಿಧಿ ವಿಧಾನ, ಬಳಿಕ ಶ್ರೀ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಶ್ರೀಗಳ ಪುರ ಪ್ರವೇಶದ ವೈಭವದ ಮೆರವಣಿಗೆ, ಕರಿಕಲ್ ಮಠದಲ್ಲಿ ಶ್ರೀ ರಾಮ ದೇವರಿಗೆ ವಿಶೇಷ ಪೂಜೆ, ಶ್ರೀ ಗಳ ಗುರುಪೂರ್ಣಿಮೆಯ ವ್ಯಾಸಪೀಠ ಪೀಠಾರೋಹಣ, ಗುರು ಪಾದುಕ ಪೂಜೆ, ಶ್ರೀಗಳ ಆಶೀರ್ವಚನ, ಕಾರ್ಯಕ್ರಮ ಧಾರ್ಮಿಕವನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಉದ್ಘಾಟನೆ ಮಾಡಲಿದ್ದು, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದರುಗಳಾದ ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ ಸಿ ಹರಿ ಪ್ರಸಾದ್, ಶಾಸಕರುಗಳಾದ ವಿ.ಸುನಿಲ್ ಕುಮಾರ್ ಕಾರ್ಕಳ, ಬೇಲೂರು ಗೋಪಾಲಕೃಷ್ಣ, ಭೀಮಣ್ಣ ಸಿರ್ಸಿ, ಹರೀಶ್ ಪೂಂಜ ಬೆಳ್ತಂಗಡಿ, ದಿನೇಶ್ ಶೆಟ್ಟಿ ಕುಮಟಾ, ಶಿವರಾಮ್ ಹೆಬ್ಬಾರ್ ಯಲ್ಲಾಪುರ, ಸತೀಶ್ ಸೈಲ್ ಕಾರವಾರ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಶಿವಾನಂದ ನಾಯ್ಕ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಭಟ್ಕಳದ ಮಾಜಿ ಶಾಸಕರುಗಳಾದ ಸುನಿಲ್ ನಾಯ್ಕ, ಜೆ. ಡಿ. ನಾಯ್ಕ ಮೊದಲಾದವವರು ಭಾಗವಹಿಸಲಿದ್ದಾರೆ ಎಂದರು.
ಚಾತುರ್ಮಾಸ್ಯ ಪರ್ವ ಕಾಲದಲ್ಲಿ ಪ್ರತಿದಿನ ಭಜನೆ, ಪಾದುಕ ಪೂಜೆ, ಸಂಜೆ 6-00ರಿಂದ 10-00ರ ತನಕ ಭಕ್ತಿಪ್ರಧಾನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿ ಅಮಾವಾಸ್ಯೆ, ಹುಣ್ಣಿಮೆ, ಏಕಾದಶಿಯಂದು ಶ್ರೀಗಳು ಮೌನ ವೃತದಲ್ಲಿರುವುದರಿಂದ ಆದಿನಗಳಲ್ಲಿ ಸೂರ್ಯಾಸ್ತದ ಬಳಿಕ ಗುರುಗಳು ದರ್ಶನಕ್ಕೆ ಇರುತ್ತಾರೆ. ಸೆ.3ರಂದು ಶ್ರೀ ಗುರುದೇವ ಮಠದಲ್ಲಿ ಶ್ರೀಗಳ ಪಟ್ಟಾಭಿಷೇಕ ವರ್ದಂತಿ ನಡೆಯಲಿದೆ ಎಂದು ಹೇಳಿದರು.ಶ್ರೀ ರಾಮ ಕ್ಷೇತ್ರ ಸಮಿತಿ ಸಂಚಾಲಕ ಜಯಂತ ಕೋಟ್ಯಾನ್ ಮಾತನಾಡಿ ಕಳೆದ ಎರಡು ವರ್ಷ ಗುರುದೇವ ಮಠದಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ಮಾಡಿದಂತೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ತಾಲೂಕಿನ ಜನತೆ ಹಸಿರುವಾಣಿ ಕಾಣಿಕೆ ಜೊತೆಗೆ ಭಾಗವಸಳಲಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗುರುದೇವ ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರಾಜೇಶ್ ಪೂಜಾರಿ ಮೂಡುಕೋಡಿ, ಶ್ರೀ ರಾಮ ಕ್ಷೇತ್ರ ಸಮಿತಿ ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಕೃಷ್ಣಪ್ಪ ಗುಡಿಗಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ.ಬೆಳಾಲು, ರವೀಂದ್ರ ಪೂಜಾರಿ ಆರ್ಲ ಉಪಸ್ಥಿತರಿದ್ದರು