

ಸುಲ್ಕೇರಿಮೊಗ್ರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಜು.15ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಪ್ರಶಾಂತ್ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಲಿನಿ, ಬೆಳ್ತಂಗಡಿ ತಾಲೂಕು ಕರ್ನಾಟಕ ಯೋಜನಾ ಸಾಮಾಜಿಕ ಪರಿಶೋಧನಾ ವ್ಯವಸ್ಥಾಪಕ ರಾಜೀವ ಸಾಲಿಯನ್, ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ, ರೂಪಶ್ರೀ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ರೇವತಿ, ಉಪಾಧ್ಯಕ್ಷೆ ನಳಿನಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಮಾಜಿ ಅಧ್ಯಕ್ಷ ಸದಾನಂದ ಎಂಕೆ, ಶಾಲಾ ಮುಖ್ಯ ಶಿಕ್ಷಕ ನಾಗಭೂಷಣ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎ ಒಕ್ಕೂಟದ ಅಧ್ಯಕ್ಷೆ ಗೀತಾ, ಬಿ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಮಹಿಷ ಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೆಂಕಪ್ಪ ಪೂಜಾರಿ, ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಸುಮಲತಾ ಹಾಗೂ ಕುlಪ್ರಮೀಳಾ, ಅಂಗನವಾಡಿ ಸಹಾಯಕಿ ಪ್ರೇಮ ಹಾಗೂ ಮಕ್ಕಳ ಎಲ್ಲಾ ಪೋಷಕರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಅಧ್ಯಾಪಕ ಸುಬ್ರಮಣ್ಯ ಭಟ್ ನಿರ್ವಹಿಸಿ, ಅಧ್ಯಾಪಕಿ ಶಾಂತಿ ಡಿಸೋಜಾ ಸ್ವಾಗತಿಸಿ, ಶಿಕ್ಷಕಿ ಶ್ವೇತ ಧನ್ಯವಾದವಿತ್ತರು.
ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ ಮಾಡಲಾಯಿತು. ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ, ಉಪಾಧ್ಯಕ್ಷರಾಗಿ ವೆಂಕಪ್ಪ ಪೂಜಾರಿ, ಕಾರ್ಯದರ್ಶಿ ಗಣೇಶ್ ಕೆ ಕಾಡಂಗೆ ಸಹ ಕಾರ್ಯದರ್ಶಿ ನಳಿನಿಯವರು, ಕೋಶಾಧಿಕಾರಿಯಾಗಿ ಸದಾಶಿವ ಅವರು ಆಯ್ಕೆಯಾದರು.