ಶಿಶಿಲ: ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆ

0

ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ನ 2024-2025ರ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜು.18ರಂದು ಪಂಚಾಯತ್ ಕಚೇರಿ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಪಂಚಾಯತ್ ಉಪಾಧ್ಯಕ್ಷ ಯಶೋಧರ ಕೆ.ವಿ, ವಿವಿಧ ಇಲಾಖೆಗಳ ಅಧಿಕಾರಿಗಳು ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಶು ಸಖಿ, ಮುಂತಾದವರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಸುಂದರರವರು ವರದಿ ಮಂಡಿಸಿದರು.

LEAVE A REPLY

Please enter your comment!
Please enter your name here