

ಅಳದಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜುಲೈ 13ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಳದಂಗಡಿ ಸೈಂಟ್ ಪೀಟರ್ ಕ್ಲೆವರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಮುಖ್ಯೋಪಾಧ್ಯಾಯರಾದ ನೋರ್ಬರ್ಟ್ ವಿ ಪೌಲ್ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು.
ಉತ್ತಮ ನಾಯಕರು ಇತರರನ್ನು ಬೆಳೆಸಿ, ಎಲ್ಲರೊಂದಿಗೆ ಬೆರೆಯುತ್ತಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸನ್ನಿ ಕೆಎಂ ಇವರು ವಹಿಸಿ ನಾಯಕತ್ವ ಗುಣ ಪ್ರತಿಯೊಬ್ಬರಲ್ಲಿದ್ದು ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು ಮತ್ತು ಈ ಸಂದರ್ಭದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣವಚನವನ್ನು ಬೋಧಿಸಿದರು.
ಕಾಲೇಜಿನ ಆಂಗ್ಲ ಉಪನ್ಯಾಸಕ ಪ್ರಕಾಶ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಹಿತ್, ಕಾರ್ಯದರ್ಶಿ ಸುಶಾಂತ್ ಭಂಡಾರಿ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.ಗಣಿತ ಉಪನ್ಯಾಸಕ ಸದಾನಂದ ಕುಲಾಲ್ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.ವಾಣಿಜ್ಯಶಾಸ್ತ್ರ ಉಪನ್ಯಾಸಕ ಜಯ ಪೂಜಾರಿ ವಂದಿಸಿದರು.