

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣನ್ ಇವರ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ತೋಟಗಾರಿಕಾ ಇಲಾಖೆಯ ಬೆಳ್ತಂಗಡಿ ಚಂದ್ರಶೇಖರ್ ಭಾಗವಹಿಸಿ ಸಭೆಯನ್ನು ನಡೆಸಿಕೊಟ್ಟರು.
ಸಭೆಯಲ್ಲಿ ಉಪಾಧ್ಯಕ್ಷ ಶುಭರಾಜ ಹೆಗ್ಡೆ, ಸದಸ್ಯರುಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಸ್ವಾಗತಿಸಿ, ಜಮಾ ಖರ್ಚಿನ ವಿವರ ನೀಡಿದರು.
ಗಣೇಶ್ ಅನುಪಾಲನಾ ವರದಿ ಮಂಡಿಸಿದರು. ಗ್ರಾಮ ಸಭೆಯಲ್ಲಿ ತಾಲೂಕಿನ ಇಲಾಖಾಧಿಕಾರಿಗಳು ಇಲಾಖೆಯಿಂದ ಸಿಗುವ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು.