ಧರ್ಮಸ್ಥಳ: ಗ್ರಾಮ ಪಂಚಾಯತ್ ನಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

0

ಧರ್ಮಸ್ಥಳ: ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು.

ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ ವಸ್ತುಗಳು, ಟಬ್ಬುಗಳು ಬಕೆಟ್ ಗಳು ಇತ್ಯಾದಿಗಳಲ್ಲಿ ನೀರು ಸಂಗ್ರಹವಾಗಿರುವ ಬಗ್ಗೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಯಿತು.

ಡೆಂಗ್ಯೂ ಮಲೇರಿಯಾ ಇದರ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಮುನ್ನೆಚ್ಚರಿಕ ಕ್ರಮವಾಗಿ ಪರಿಶೀಲನೆ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ., ಲೆಕ್ಕ ಸಹಾಯಕಿ ಪ್ರಮೀಳಾ, ಸಂಜೀವಿನಿ ಒಕ್ಕೂಟದ ಚಂದ್ರವತಿ, ವೀಣಾ, ಗ್ರಂಥಪಾಲಕಿ ಮಂಜುಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here