


ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಜು.20ರಂದು ಕೆದ್ದು ದೀಪಾ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ರವರು ಉದ್ಘಾಟನೆಯನ್ನು ಮಾಡಿದ್ದರು.



ಸಂಪನ್ಮೂಲ ವ್ಯಕ್ತಿಗಳಾಗಿ ಯಶಸ್ವಿ ಕಾಳುಮೆಣಸು ಕೃಷಿಕ ಸುರೇಶ್ ಬಲ್ನಾಡ್, ಜಾಯಿಕಾಯಿ ಕೃಷಿ ಸಾಧಕ ಟಿ.ಆರ್.ಸುರೇಶ್ಚಂದ್ರ ತೊಟ್ಟೆತ್ತೋಡಿ, ಕಾಫಿ ಬೆಳೆಗಾರರಾದ ಅಜಿತ್ ಪ್ರಸಾದ್ ರೈ, ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭಕರ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೀರಾ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡರವರು ಸಸಿಗಳನ್ನು ವಿತರಣೆ ಮಾಡಿದರು.ಕೃಷಿಯಲ್ಲಿ ಸಾಧನೆ ಮಾಡಿದ ಶಂಕರ್ ಭಟ್ ಕೊಟ್ಟೂರು, ಈಶ್ವರ ಪೂಜಾರಿ ಬಿರ್ಮಜ್ರಿ ಅವರಿಗೆ ಸನ್ಮಾನಿಸಿದರು.ಸ್ವಾಗತವನ್ನು ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಸ್ವಾಗತಿಸಿದರು.









