ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ರಾಜ್ಯ ಪ್ರಶಸ್ತಿ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್, ಅಹಾನ್ ಜೈನ್, ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ, ಯಕ್ಷಿತಾ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ಹಿರಕ್ ಗರಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದು, ಪ್ರಶಸ್ತಿ ಪತ್ರವನ್ನು ರಾಜ್ಯಪಾಲರು ಗಾಜಿನ ಮನೆ ಬೆಂಗಳೂರಿನಲ್ಲಿ ನೀಡಲಿದ್ದಾರೆ.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ, ಶಾಲಾ ಸ್ಕೌಟ್ ಗೈಡ್ ನಿಯೋಜಿತ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಇವರಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here